ಸಹ್ಯಾದ್ರಿ ಸುದ್ದಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆನ್ ಲೈನ್ ಮೂಲಕ ಸೇವೆ, ಪ್ರಸಾದ ಪಡೆಯುವ ಭಕ್ತರೇ ಎಚ್ಚರ ಎಚ್ಚರ..!

ಚಿಕ್ಕಮಗಳೂರು: ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಆರೋಪದ ಮೇಲೆ ತೆಲಂಗಾಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣ  ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್  ಬಂಧಿತ ಆರೋಪಿಗಳು. ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಇಬ್ಬರನ್ನು ಬಂಧಿಸಿದೆ. ಬಂಧಿತ ಇಬ್ಬರು ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದರು ಎನ್ನಲಾಗಿದೆ.

ಆರೋಪಿಗಳು Www.Devaseva.com ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದಿದ್ದು, ಅದರ ಮೂಲಕ ದೇಶದ ಮತ್ತು ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಸಿ ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸುತ್ತಿದ್ದರು.

ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ವಂಚನೆ ನಡೆಯುತ್ತಿರುವ ಬಗ್ಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವಾಲಯದ ಉಪವ್ಯವಸ್ಥಾಪಕ ರಾಘವೇಂದ್ರ ಅವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದು, ವಂಚನೆಗೆ ಒಳಗಾದ ಭಕ್ತರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

ಆನ್ಲೈನ್ ಮೂಲಕ ಸೇವೆ, ಪ್ರಸಾದ ಪಡೆಯುವ ಭಕ್ತರೇ ಎಚ್ಚರ

ಭಕ್ತರು ವಿಶೇಷ ಪೂಜೆ, ಪ್ರಸಾದ ಅಥವಾ ಸೇವೆಗಾಗಿ ಆನ್ಲೈನ್ ಮೂಲಕ ಹಣ ಪಾವತಿ ಮಾಡುವ ಮೊದಲು ದೇವಾಲಯಗಳ ಅಧಿಕೃತ ವೆಬ್ಸೈಟ್ ಅಥವಾ ದೇವಾಲಯ ನಿರ್ವಹಣಾ ಮಂಡಳಿಯನ್ನು ನೇರವಾಗಿ ಸಂಪರ್ಕಿಸಿ ಮಾಹಿತಿ ಪರಿಶೀಲಿಸುವುದು ಉತ್ತಮ. ಅನಧಿಕೃತ ವೆಬ್ಸೈಟ್ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿ ಅಥವಾ ಬ್ಯಾಂಕ್ ವಿವರಗಳನ್ನು ಹಂಚಬೇಡಿ. ಯಾವುದೇ ಸಂಶಯಾಸ್ಪದ ವೆಬ್ಸೈಟ್ ಅಥವಾ ವಂಚನೆ ಪ್ರಯತ್ನ ಕಂಡುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಸೈಬರ್ ಕ್ರೈಂ ಪೋರ್ಟಲ್ಗೆ (www.cybercrime.gov.in) ದೂರು ನೀಡಿ ಎಂದು ಸೈಬರ್ ಪೊಲೀಸರು ಸಲಹೆ ನೀಡಿದ್ದಾರೆ.

 

Related posts

ಸಂಸ್ಕೃತಿ, ಸಂಸ್ಕಾರವಿಲ್ಲದ ಬದುಕು ಅರ್ಥವಿಲ್ಲದ್ದು: ಶ್ರೀ ಪ್ರಸನ್ನನಾಥ ಸ್ವಾಮೀಜಿ

Editor

 18 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುವರ್ಣ ಸ್ವರ ಸಂಭ್ರಮ.

Editor

ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್

Editor