ಸಹ್ಯಾದ್ರಿ ಸುದ್ದಿ
ಕ್ರೀಡೆಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಚೀನಾ ಏಷ್ಯನ್ ಗೇಮ್ಸ್ ಚಾಂಪಿಯನ್: ಅವಳಿ ಸಹೋದರರು ಭಾರತ ತಂಡಕ್ಕೆ ಆಯ್ಕೆ

 ಶಿವಮೊಗ್ಗ: ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪವನ್, ಪುನೀತ್, ಅವಳಿ ಸಹೋದರರು,ದೇಶದ ಪ್ರಮುಖ ಆಟಗಾರರಾಗುವ ಭರವಸೆ ಮೂಡಿಸಿದ್ದಾರೆ.
ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ  ಓದುತ್ತಿರುವ ಅವಳಿ ಸಹೋದರರು,10ನೇ ತರಗತಿಯಲ್ಲಿ ವ್ಯಾಸಂಗಮಾಡುತ್ತಿದ್ದು, ಆಟದ ಜೊತೆಗೆ ಓದಿನಲ್ಲಿಯೂ ಮುಂದಿದ್ದಾರೆ.
ಪುನೀತ್.ಎಸ್. ಮತ್ತು ಪವನ್.ಎಸ್. ಹರಿಯಾಣದ ಪಂಚಕುಲದಲ್ಲಿ  ನಡೆದಂತಹ 17 ವರ್ಷ ವಯೋಮಿತಿಯೊಳಗಿನ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿಭೆಗಳು.
ಈ ಪ್ರತಿಭಾನ್ವಿತರು ಹರಿಯಾಣದ ಪಂಚಕುಲದ ಒಳಾಂಗಣ  ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ  ರಾಷ್ಟ್ರೀಯ ಡಬಲ್ಸ್ ರ‌್ಯಾಂಕಿಂಗ್ ನಲ್ಲಿ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ, ಚಾಕ ಚಕ್ಕತೆಯ  ಆಟದ ಪ್ರದರ್ಶನ ನೀಡಿ, ಡಬಲ್ಸ್ ನಲ್ಲಿ ಮತ್ತು ಮಿಕ್ಸಡ ಡಬಲ್ಸ್ ನಲ್ಲಿ  ಪ್ರಥಮ ಸ್ಥಾನ ಪಡೆದು.ಹಾಗೂ ಅತ್ಯಾಕರ್ಷಕ  ಪಾರಿತೋಷಕ ಮತ್ತು ಬಂಗಾರದ ಪದಕವನ್ನು ಜಿಲ್ಲೆ ಮತ್ತು ರಾಜ್ಯಕ್ಕೆ ಹಾಗೂ ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.
ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್  ಡಬಲ್ಸ್ ರ‍್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಚರಣ್ ರಾಮ್ ಮತ್ತು ಹರಿಕೃಷ್ಣರನ್ನು ಸೋಲಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದು,ಭಾರತ ತಂಡಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.
ಮುಂದಿನ ತಿಂಗಳು ಅಕ್ಟೋಬರ್ 21 ರಿಂದ ಚೀನಾದಲ್ಲಿ ನಡೆಯುವ ಅಂಡರ್ 17  ವಯೋ ಮಿತಿಯೊಳಗಿನ ಏಷ್ಯನ್ ಗೇಮ್ಸ್ ಷಟಲ್  ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ಪರವಾಗಿ ಆಡಲಿದ್ದಾರೆ.
ಈ ಪ್ರತಿಭೆಗಳು ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ಮಧುಸೂಧನ್  ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ
ಈ ಕ್ರೀಡಾ ಪ್ರತಿಭೆಗಳು ರಾಷ್ಟ ಮತ್ತು ಅಂತರ್ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ

Related posts

ಪ್ರಾಥಮಿಕ ಶಾಲೆ ಶಿಕ್ಷಕರಾಗುವವರಿಗೆ ಬಿಎಡ್ ಅರ್ಹತೆ ಸಂಬಂಧ ಕೇಂದ್ರದ ಅಧಿಸೂಚನೆ ವಜಾ…

Editor

ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಮನವಿ

Editor

ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ- ಕ್ಲೀನ್ ಚಿಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

Editor