ಮುಂಬೈ: ಅಕ್ಟೋಬರ್ 2 ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದ್ದು, ಮೂವರು ಕನ್ನಡಿಗರಿಗೆ ಸ್ಥಾನ ದೊರಕಿದೆ.
ಶುಭ್ಮನ್ ಗಿಲ್ ನಾಯಕನಾಗಿ ಮುಂದುವರೆಯಲಿದ್ದು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಕರ್ನಾಟಕದ ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್ ಮತ್ತು ಬೌಲರ್ ಪ್ರಸಿದ್ದ್ ಕೃಷ್ಣ ಆಯ್ಕೆಯಾಗಿದ್ದಾರೆ.
ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಂಡರೇ ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್. ಜಗದೀಸನ್ ಆಯ್ಕೆಯಾಗಿದ್ದಾರೆ. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ತಂಡದಲ್ಲಿದ್ದಾರೆ.
ತಂಡ ಹೀಗಿದೆ..
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದ್ದು, ಎರಡು ಪಂದ್ಯಗಳ ಈ ಸರಣಿಗೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಹಾಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ನಡೆಯಲಿದೆ.