ಸಹ್ಯಾದ್ರಿ ಸುದ್ದಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನೆರೆ ಹಾನಿ :  ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದ  ಸಿಎಂ ಸಿದ್ದರಾಮಯ್ಯ

ಕಲಬುರಗಿ:  ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.

ಇದಕ್ಕೂ ಮುನ್ನ ಸಿಎಂ  ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ,  ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ  ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ ಕೈಗೊಂಡರು.

Related posts

ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ

Editor

ಒಂದು ಸಣ್ಣ ತಪ್ಪು ಸರ್ಕಾರವನ್ನು ಪತನಗೊಳಿಸಬಹುದು- ಎನ್ ಡಿಎ ಸರ್ಕಾರದ ಭವಿಷ್ಯ ನುಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

Editor

 ವಿದ್ಯಾರ್ಜನೆ‌ಯೇ ನಮ್ಮ ಮೂಲಭೂತ ಕರ್ತವ್ಯವಾಗಬೇಕು-ಅನಿಲ್ ಕುಮಾರ್ ಭೂಮರೆಡ್ಡಿ

Editor