ಸಹ್ಯಾದ್ರಿ ಸುದ್ದಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್  ವಾರ್ನಿಂಗ್

ಬೆಂಗಳೂರು: ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಬೆಳಂದೂರು ಪೊಲೀಸ್‌‍ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ ಮತ್ತು ಕಾನ್ಸ್ ಟೆಬಲ್‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದುಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದರು.

ಪೊಲೀಸ್‌‍ ಇಲಾಖೆಯಲ್ಲಿ ಲಂಚ ಪಡೆದಿದ್ದರೆ ಅದು ಸಾವಿರ ಇರಲಿ, ಐದುನೂರು ರೂಪಾಯಿಯೇ ಇರಲಿ ತಕ್ಷಣವೇ ಅಮಾನತಿನಂತಹ ಕ್ರಮ ಕೈಗೊಂಡು ಇಲಾಖೆಯ ವಿಚಾರಣೆ ನಡೆಸಲಾಗುವುದು. ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುತ್ತದೆ ಎಂದರು.

Related posts

ನಾಡ ದೇವತೆ ಬಿದರೆಗುಡಿಯ ಬಿದರಾಂಬಿಕ ದೇವಿಯ ಅದ್ದೂರಿ ಸಿಡಿ ಉತ್ಸವ.

Editor

‘ಲೋಕಸಭೆ ಫಲಿತಾಂಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸೇಫ್.

Editor

ಕಾಲ್ತುಳಿತ ಕೇಸ್: KSCA ಅಧಿಕಾರಿಗಳಿಗೆ ರಿಲೀಫ್ ನೀಡಿದ ಹೈಕೋರ್ಟ್

Editor