ಚಿಕ್ಕಮಗಳೂರು: ಸಂವಿಧಾನದ ಆಶಯದಂತೆ ಜನಸಾಮಾನ್ಯರಿಗೆ ನ್ಯಾಯಯುತವಾದ ಜೀವನವನ್ನು ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಗೌರವಾನ್ವಿತ ನ್ಯಾಯಮೂರ್ತಿ ಉಪಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಹೇಳಿದರು.
ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಹಾಗೂ ವಿಚಾರಣೆ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರ ಮೂಲಭೂತ ಸವಲತ್ತುಗಳ ಜೊತೆಗೆ ಹಕ್ಕು ಬಾಧ್ಯತೆಯನ್ನು ನೀಡಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ ಆ ಹಕ್ಕುಗಳಿಂದ ಸಿಗುವ ಮೂಲಭೂತ ಸವಲತ್ತುಗಳನ್ನು ಪಡೆದುಕೊಳ್ಳಲು ಸರ್ಕಾರ ಶ್ರಮವಹಿಸಿ ಕಾನೂನುಗಳನ್ನು ರಚನೆ ಮಾಡಿದೆ ಎಂದು ಹೇಳಿದ ಅವರು ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸರ್ಕಾರವು ರೂಪಿಸಿದ ಯೋಜನೆಗಳು ಹಾಗೂ ಇತರೆ ಸೌಲಭ್ಯಗಳನ್ನು ಎಲ್ಲರಿಗೂ ದೊರಕಿಸುವ ಕಾರ್ಯವನ್ನು ಲೋಕಾಯುಕ್ತ ಸಂಸ್ಥೆ ಮಾಡುತ್ತಿದೆ ಸಮಾಜದಲ್ಲಿರುವ ಪ್ರತಿಯೊಬ್ಬರು ಗೌರವಯುತವಾಗಿ ಎಲ್ಲಾ ಸವಲತ್ತುಗಳನ್ನು ಹೊಂದಿ ಸಂತೋ?ವಾಗಿ ಬಾಳುವುದೇ ಭಾರತ ಸಂವಿಧಾನದ ಅಶೋತ್ತರ ಜೀವನ ಎಂದು ಹೇಳಿದರು.
ಭಾರತ ಸಂವಿಧಾನದ ಮಹತ್ವ ಶಾಸಕಾಂಗ, ಕಾಯಾಂಗ ಹಾಗೂ ನ್ಯಾಯಾಂಗದ ಕಾರ್ಯ ಪ್ರಕ್ರಿಯೆಗಳನ್ನು ಮನಮುಟ್ಟುವಂತೆ ಸವಿಸ್ತಾರವಾಗಿ ತಿಳಿಸಿಕೊಟ್ಟ ಅವರು ಲೋಕಾಯುಕ್ತ ಸಂಸ್ಥೆಯ ಸ್ಥಾಪನೆ ಉದ್ದೇಶ, ಹಿನ್ನೆಲೆ, ಕಾರ್ಯವ್ಯಾಪ್ತಿ ಹಾಗೂ ಸಂಸ್ಥೆಯ ಕಾರ್ಯಮಾರ್ಗಸೂಚಿ ಪ್ರಕ್ರಿಯೆಗಳ ಮಾಹಿತಿ ನೀಡಿದರು. ಶಾಸಕಾಂಗ, ಕಾಯಾಂಗ ಮತ್ತು ನ್ಯಾಯಾಂಗದ ಕಾರ್ಯನಡೆಗಳ ಬಗ್ಗೆ ಸರ್ಕಾರದ ನಾಲ್ಕನೇ ಅಂಗವಾದ ಮಾಧ್ಯಮ ರಂಗವು ನಿರಂತರ ನಿಗಾವಹಿಸುತ್ತಿದೆ. ಯಾವುದೇ ಅಂಗಗಳಲ್ಲಿನ ಲೋಪದೋ?ಗಳನ್ನು ಪ್ರಜೆಗಳ ಮುಂದಿಟ್ಟು ಸರಿಪಡಿಸುವಂತಹ ಮಹತ್ವದ ಜವಬ್ದಾರಿಯನ್ನು ಮಾಧ್ಯಮ ಕ್ಷೇತ್ರ ನಿರ್ವಹಿಸುವುದರಿಂದ ಈ ಕ್ಷೇತ್ರದ ಪಾತ್ರ ಮಹತ್ವದ್ದು, ಆದ್ದರಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯ ವಿಧಾನವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಾವೆಲ್ಲರೂ ತಲುಪಿಸಲು ಸಂಸ್ಥೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಸಾರ್ವಜನಿಕರಿಗೆ ಲಿಖಿತ ಅರ್ಜಿ ಸಲ್ಲಿಸುವ ವಿಧಾನ, ದಾಖಲೆ ಸಹಿತ ಅರ್ಜಿ ಸಲ್ಲಿಕೆ ಹಾಗೂ ಯಾವ ರೀತಿಯ ಅರ್ಜಿಗಳನ್ನು ಲೋಕಯುಕ್ತಕ್ಕೆ ಸಲ್ಲಿಸಬಹುದು, ಈ ಎಲ್ಲ ವಿಚಾರಗಳ ಬಗ್ಗೆ ವಿಸ್ಕೃತವಾಗಿ ಸಾರ್ವಜನಿಕರಿಗೆ ತಿಳಿಸಿಕೊಟ್ಟ ಅವರು ಸ್ವೀಕರಿಸಿದ ಕೆಲವು ದೂರು ಅರ್ಜಿಗಳ ಬಗ್ಗೆ ಸ್ಥಳದಲ್ಲೇ ತೀರ್ಮಾನ ಕೈಗೊಂಡು ಅದಕ್ಕೆ ಸ್ಥಳದಲ್ಲೆಯೇ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಅಧಿಕಾರಿಗಳು ಜನ ಸಾಮನ್ಯರ ಸಮಸ್ಯೆಯನ್ನು ಸರಿಯಾದ ರೀತಿಯಲ್ಲಿ, ನಿಯಮಾವಳಿ, ಕಾನೂನಿನ ಪ್ರಕಾರವಾಗಿ, ಸಮಯೋಚಿತವಾಗಿ ಪರಿಹಾರ ಒದಗಿಸಿಬೇಕು ಅದಲ್ಲದೇ ಅಧಿಕಾರವನ್ನು ದುರುಪಯೋಗ, ಭ್ರಷ್ಟಚಾರ ಇಂತಹ ಕಾರಣದಿಂದ ಅವರ ಮೇಲೆ ಅಸಡ್ಡೆತನ ತೋರಿಸಿದರೆ ಅಂತಹ ಅಧಿಕಾರಿಯ ಮೇಲೆ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಸಾರ್ವಜನಿಕರು ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಂದಿಸಿ ಸಮಾಧಾನದಿಂದ ಅವರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದ ಅವರು ಕರ್ನಾಟಕ ರಾಜ್ಯ ಶಾಸಕಾಂಗವು ೧೯೮೫ ರ ಕರ್ನಾಟಕ ಅಧಿನಿಯಮ ಸಂಖ್ಯೆ ೪ ರ ಅಡಿಯಲ್ಲಿ ಕಾಯಿದೆಯನ್ನು ಜಾರಿಗೊಳಿಸಿದೆ. ಆಡಳಿತ ಯಂತ್ರದಲ್ಲಿ ಭ್ರ?ಚಾರ, ಸ್ವಜನಪಕ್ಷಪಾತ ಮತ್ತು ಅಶಿಸ್ತಿನ ಪ್ರಕರಣಗಳು ಸೇರಿದಂತೆ ಆಡಳಿತಾತ್ಮಕ ಕ್ರಮಗಳ ವಿರುದ್ಧ ದೂರುಗಳ ವಿಚಾರಣೆ ನಡೆಸುವ ಮೂಲಕ ಸಾರ್ವಜನಿಕ ಆಡಳಿತ ಗುಣಮಟ್ಟವನ್ನು ಸುಧಾರಿಸಲು ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ರಚಿಸಿಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಎಂ ಪಾಟೀಲ್, ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೀಕರ್, ಶಿವಾಜಿ ಅನಂತ ನಲ್ಪಾಡೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ. ಹನುಮಂತಪ್ಪ, ಜಿಲ್ಲಾಧಿಕಾರಿ ಮೀನಾನಾಗರಾಜ್ ಸಿ.ಎನ್,ಹಾಸನ ಚಿಕ್ಕಮಗಳೂರು ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಸ್ನೇಹಾ, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.