ಸಹ್ಯಾದ್ರಿ ಸುದ್ದಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯವಿದೇಶ

10ನೇ ತರಗತಿ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ……

ಡೆಹ್ರಾಡೂನ್‌: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು  ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್‌ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ  ದೂರು ನೀಡಲಾಗಿದೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸೋಷಿಯಲ್‌ ಮೀಡಿಯಾದಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನ ಕಳಿಸಿದ್ದಾನೆ. ಮೆಸೇಜ್‌ ಜೊತೆಗೆ ಸ್ನ್ಯಾಪ್‌ ಚಾಟ್‌ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ. ಇದರಿಂದ ಮಾನಸಿಕ ತೊಂದರೆಗೆ ಒಳಗಾದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.

Related posts

ಖಾತೆಗೆ ಜಮೆ ಆಗದ ಗೃಹ ಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ : ಸಂತ್ರಸ್ತರಿಂದ ಪ್ರತಿಭಟನೆ.

Editor

ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ-ಶ್ರೀ ಪ್ರಸನ್ನನಾಥ ಸ್ವಾಮೀಜಿ

Editor

ನೂತನ ಪತ್ರಕರ್ತರ  KWJVoice ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಪಧಾದಿಕಾರಿಗಳ ಆಯ್ಕೆ-ನೇಮಕ

Editor