ಸಹ್ಯಾದ್ರಿ ಸುದ್ದಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗ್ರಾಹಕರಿಗೆ ಶಾಕ್: ಶೀಘ್ರವೇ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ.

ನವದೆಹಲಿ: ಶೀಘ್ರದಲ್ಲೇ ಗ್ರಾಹಕರಿಗೆ  ಶಾಕ್ ಕಾದಿದ್ದು ಕಚ್ಚಾ ತೈಲ ಬೆಲೆಯಲ್ಲಿ ಏರಿಕೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವ್ಯಾಪಾರಿ ಹಡಗುಗಳ ಮೇಲೆ ಯೆಮೆನ್ನ ಹೌತಿ ಬಂಡುಕೋರರಿಂದ ನಿರಂತರವಾಗಿ ದಾಳಿ ನಡೆಯುತ್ತಿರುವ ಹಿನ್ನೆಲೆ ತೈಲ ಪೂರೈಕೆಯ ಮೇಲೆ ಪ್ರಭಾವ ಬೀರುತ್ತಿದೆ. ಇದರಿಂದ ಭಾರತದಲ್ಲಿ ಶೀಘ್ರವೇ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಕೆಂಪು ಸಮುದ್ರದಲ್ಲಿನ ಹಡಗುಗಳ ಮೇಲಿನ ದಾಳಿಯು ವಿಶ್ವದ ಪ್ರಮುಖ ಹಡಗು ಮಾರ್ಗಗಳಲ್ಲಿ ವ್ಯಾಪಾರಕ್ಕೆ ಅಡಚಣೆ ಉಂಟು ಮಾಡುತ್ತಿದೆ.ಹಡಗುಗಳು ಸುರಕ್ಷಿತವಾಗಿ ಓಡಾಟ ನಡೆಸಲು ದಕ್ಷಿಣ ಆಫ್ರಿಕಾದ ಸುತ್ತಲೂ ಸುತ್ತಿ ಬರಲಾಗುತ್ತಿದ್ದು, ಸಾಗಣೆ ಸಮಯ 10- 15 ದಿನಗಳು ಹೆಚ್ಚಾಗುತ್ತಿದೆ. ಹೌತಿ ಬಂಡುಕೋರರಿಂದ ಕೆಂಪು ಸಮುದ್ರದಲ್ಲಿ ನಿರಂತರವಾಗಿ ಸಂಘರ್ಷಗಳು ನಡೆಯುತ್ತಿದ್ದು, ಇದರಿಂದಾಗಿ ವಿಶ್ವಾದ್ಯಂತ ಪೂರೈಕೆ ಸರಪಳಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ವರ್ಲ್ಡ್ ಎಕನಾಮಿಕ್ ಫೋರಮ್ ಅಧ್ಯಕ್ಷರಾದ ಬೋರ್ಜ್ ಬ್ರೆಂಡೆ ಅವರ ಮಾಹಿತಿ ಅನುಸಾರ, ಈ ಪರಿಸ್ಥಿತಿಯು ಭಾರತದಂತಹ ತೈಲ ಆಮದುಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ತೈಲ ಬೆಲೆಯಲ್ಲಿ $10-20 (₹820- ₹1640) ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಹೆಚ್ಚಳವು ಭಾರತೀಯ ಆರ್ಥಿಕತೆಯ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಬಹುದು ಎಂದಿದ್ದಾರೆ.

 

Related posts

ಲಾರಿಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, 15 ಜನರಿಗೆ ಗಾಯ

Editor

ದಿ. ಬಂಗಾರಪ್ಪ ಬಡವರ ಕಣ್ಮಣಿಯಾಗಿದ್ದರು-ಹುಲ್ತಿಕೊಪ್ಪ ಶ್ರೀಧರ್

Editor

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವವನ್ನು ಮೂಡಿಸುವವಲ್ಲಿ ಎನ್‍ಎಸ್‍ಎಸ್ ಪಾತ್ರ ಮುಖ್ಯ-ಬಂಗಾರಪ್ಪ

Editor