ಬೆಂಗಳೂರು: ಅನಾರೊಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಪೇಸ್ ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
‘ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದ್ದೇನೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
‘ವಯೋಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದಾಗಿ ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಸಲು ವೈದ್ಯರು ಸಲಹೆ ನೀಡಿದ್ದರು. ಹೃದಯ ಬಡಿತದ ಸ್ಥಿರತೆಗಾಗಿ ಇದು ಅಗತ್ಯ. ಇದನ್ನು ಹೊರತುಪಡಿಸಿದರೆ ಬೇರೆ ಯಾವುದೇ ತೊಂದರೆ ಇಲ್ಲ’ ಎಂದಿದ್ದರು.