ಶಿವಮೊಗ್ಗ: ಪಂಡಿತ್ ಜವಾರಲಾಲ್ ನೆಹರೂರವರ ಪುಣ್ಯಸ್ಮರಣೆ. ಇಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರೂ ರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಸಿ ಎಸ್ ಚಂದ್ರಭೂಪಾಲ್, ಭೋವಿ ನಿಗಮದ ರಾಜ್ಯಾಧ್ಯಕ್ಷ ರವಿಕುಮಾರ್, ಕಚೇರಿ ಆಡಳಿತ ಮುಖ್ಯಸ್ಥ ಎಸ್ ಟಿ ಹಾಲಪ್ಪ, ಎಸ್ ಟಿ ವಿಭಾಗದ ಅಧ್ಯಕ್ಷ ಶಿವಣ್ಣ, ಪ್ರಮುಖರಾದ ಚಿನ್ನಪ್ಪ, ಸ್ಟೆಲ್ಲಾ ಮಾರ್ಟಿನ್, ಶಮೀಮ್ ಬಾನು, ಕುಮಾರ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

