ಸಹ್ಯಾದ್ರಿ ಸುದ್ದಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜೀವಕೋಶಗಳಿದ್ದಂತೆ-ಎಸ್.ಪಿ.ಶೇಷಾದ್ರಿ

ಶಿವಮೊಗ್ಗ,ಜ.10: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜೀವಕೋಶಗಳಿದ್ದಂತೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ ತಿಳಿಸಿದ್ದಾರೆ.
ಸರ್ಕಾರದ 5ನೇ ಮತ್ತು ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುತ್ತಿರುವುದು ಅತ್ಯಂತ ಸಂಭ್ರಮವಾಗಿದೆ. 12ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರುಗಳು ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳರಿದ್ದಾರೆ. ಯುವನಿಧಿ ಯುವಕರ ಪಾಲಿಕೆ ಒಂದು ರೀತಿಯ ವರದಾನವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಯ ಯುವಕರು ಹೆಚ್ಚಾಗಿ ಭಾಗವಹಿಸಬೇಕು ಮತ್ತು ಸಮಾಜದ ಬಾಂಧವರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅನೇಕ ಯೋಜನೆಗಳು ಜಾರಿಗೊಂಡು ಕರ್ನಾಟಕ ಕಲ್ಯಾಣ ರಾಜ್ಯವಾಗಲಿದೆ ಎಂದು ಎಸ್.ಪಿ.ಶೇಷಾದ್ರಿ ತಿಳಿಸಿದ್ದಾರೆ.

Related posts

ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇಮಕ

Editor

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿಯ ಅನಾವರಣ- ಸಚಿವ ಎಂ.ಬಿ ಪಾಟೀಲ್

Editor

ಡಾ. ಸೈಯದ್‍ ಸನಾವುಲ್ಲಾರವರು ಶಿಕ್ಷಣ ಸಂಸ್ಥೆಯನ್ನು ಸದಾ ಪ್ರೀತಿಸುವವರು-ಪ್ರೊ. ಶರತ್ ಅನಂತ್‍ ಮೂರ್ತಿ

Editor