ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಹೆಚ್ಚುವರಿ ದಿಂಬು ಹಾಸಿಗೆ ಕೋರಿ ಸಲ್ಲಿಸಿರುವ ಅರ್ಜಿ ಆದೇಶವನ್ನ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯಲ್ಲಿ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ.
ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ ಸರ್ಕಾರಿ ವಕೀಲರು ಮತ್ತು ಆರೋಪಿ ನಟ ದರ್ಶನ್ಪ ರ ವಕೀಲರ ನಡುವೆ ವಾದ ಕಾವೇರಿತು.
ಜೈಲು ಅಧಿಕಾರಿಗಳ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ನಟ ದರ್ಶನ್ ಪರ ವಕೀಲ ಸುನೀಲ್ ವಾದ ಮಂಡಿಸಿದರು. ಎರಡು ಕಡೆ ವಾದ ಪ್ರತಿವಾದ ಆಲಿಸಿದ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಅರ್ಜಿ ಆದೇಶವನ್ನ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದ್ದಾರೆ.